ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.
ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ಈಜಲು ತೆರಳಿದ್ದ ಲೋಹಿತ್ ಹಾಗೂ ಯತೀಶ್ ಮೃತಪಟ್ಟಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ಸಹೋದರರು ತಲಕಾಡಿಗೆ ಸ್ನೇಹಿತರ ಜೊತೆ ಆಗಮಿಸಿದ್ದರು. ಈಜಲು ನೀರಿಗೆ ಇಳಿದಿದ್ದು, ಮುಳುಗಿ ಮೃತಪಟ್ಟಿದ್ದಾರೆ. ಇವರ ಜೊತೆಗೆ ಈಜಲು ತೆರಳಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ.