Friday, February 3, 2023

Latest Posts

ಪಾರಿವಾಳ ಹಿಡಿಯಲು ಯತ್ನಿಸಿದ ಇಬ್ಬರು ಬಾಲಕರಿಗೆ ತಗುಲಿದ ಹೈಟೆನ್ಶನ್ ವಿದ್ಯುತ್ ವಯರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಾಯಗೊಂಡಿರುವ ಘಟನೆ ನಡೆದಿದೆ.

ಇಲ್ಲಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ, ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ಇಬ್ಬರು ಬಾಲಕರಿಗೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್(Electric shock) ತಾಗಿದ್ದರಿಂದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಬಾಲಕರು ಸುಪ್ರೀತ್(12) ಮತ್ತು ಚಂದ್ರು(10) ಎಂದು ತಿಳಿದುಬಂದಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆ ಮೂಲಗಳ ಪ್ರಕಾರ ಇಬ್ಬರೂ ಬಾಲಕರಿಗೆ ಶೇ.60ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!