ಉಕ್ರೇನ್‌ನಿಂದ ಆಗಮಿಸುವವರ ನೆರವಿಗೆ ಇಬ್ಬರು ಅಧಿಕಾರಿಗಳ ನೇಮಕ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಉಕ್ರೇನ್‌ನಿಂದ ಕನ್ನಡದವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ಜಾರಿಯಲ್ಲಿದೆ. ಮುಂಬೈ ಹಾಗೂ ಹೊಸದಿಲ್ಲಿಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳುಹಿಸಲು ನೆರವು ಒದಗಿಸಲು ಮುಂಬೈನಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಉಕ್ರೇನ್‌ನಿನ ಈಶಾನ್ಯ ಭಾಗದಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ವಿದೇಶಾಂಗ ಸಚಿವರೊಂದಿಗೆ ಮಾತನಾಡಿ ಅವರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಹಾಗೂ ಅವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಮಾರ್ಗದರ್ಶನ ನೀಡುವಂತೆ ಕೋರಲಾಗಿದೆ ಎಂದರು.

ರೋಮಾನಿಯಾ ಗಡಿಯಲ್ಲಿ ದಟ್ಟಣೆಯಾಗುತ್ತಿದ್ದು, ಕನ್ನಡಿಗರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!