ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಖಾಸಗಿ-ಸಾರಿಗೆ ಸಂಸ್ಥೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶಿರಸಿ ತಾಲೂಕಿನ ಇಸಳೂರು ಬಳಿ ಇಂದು ಬೆಳಗ್ಗೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಶಿರಸಿಯಿಂದ ಅಕ್ಕಿಆಲೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಬಸ್‌ನೊಳಗಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!