ಹೊಸದಿಗಂತ ಡಿಜಿಟಲ್ ಡೆಸ್ಕ್:
ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆಕೆಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದರ್ಶನ್ (4) ಮತ್ತು ಸುಮಾ (5) ಕೊಲೆಯಾದ ಮಕ್ಕಳು. ತಾಯಿ ಸಾವಿತ್ರಿ ಸರ್ಕಾರ್ (32) ತನ್ನ ಇಬ್ಬರು ಮಕ್ಕಳನ್ನು ಕೊಂದ ತಾಯಿ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ಹೊರಬೀಳಲಿದೆ. ಈ ಸಂಬಂಧ ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.