ಊಟಕ್ಕೆ ಮೊದಲು 2ಬೆಳ್ಳುಳ್ಳಿ ಎಸಳು ಸೇವನೆಯಿಂದ ಸೋಂಕು ನಿವಾರಣೆಯಾಗುತ್ತದೆಯೇ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ಪಾಕಪದ್ಧತಿಯಲ್ಲಿ ಬೆಳ್ಳುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಪ್ರತಿ ಮನೆಯ ಅಡುಗೆಯಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ಆಹಾರಕ್ಕೆ ಸುವಾಸನೆ ಮತ್ತು ರುಷಿ ಸೇರಿಸುವುದು ಮಾತ್ರವಲ್ಲದೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ನಿಯಮಿತವಾಗಿ ಆಹಾರದ ಭಾಗವಾಗಿ ಸೇವಿಸುವವರಿಗೆ ಶೀತ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳು ನಮ್ಮನ್ನು ಕಾಡುವುದಿಲ್ಲ.

ಅನಿಯಂತ್ರಿತ ರಕ್ತದೊತ್ತಡವು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಮೂತ್ರಪಿಂಡ ವೈಫಲ್ಯಕ್ಕೂ ಕಾರಣವಾಗಬಹುದು. ಹಾಗಾಗಿ ರಕ್ತದೊತ್ತಡವನ್ನು ನಿಯಂತ್ರಿಸಲು ಬೆಳ್ಳುಳ್ಳಿಯನ್ನು ಸೇವಿಸುವುದು ಒಳ್ಳೆಯದು. ಬೆಳ್ಳುಳ್ಳಿ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ಹೃದ್ರೋಗದಿಂದ ಬಳಲುತ್ತಿರುವವರು ಪ್ರತಿದಿನ ಬೆಳ್ಳುಳ್ಳಿ ತಿನ್ನುವುದರಿಂದ ಹೃದಯಕ್ಕೆ ರಕ್ತದ ಹರಿವು ಸುಧಾರಿಸುವುದರಿಂದ ಹೃದಯಾಘಾತದಿಂದ ದೂರವಿರಬಹುದು.

ದಿನನಿತ್ಯದ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿಕೊಳ್ಳುವವರು ರಕ್ತಹೀನತೆಯಿಂದ ಬೇಗನೆ ಮುಕ್ತಿ ಹೊಂದುತ್ತಾರೆ. ಮಹಿಳೆಯರಲ್ಲಿ ಹೆಚ್ಚಿದ ಈಸ್ಟ್ರೊಜೆನ್ ಹಾರ್ಮೋನ್ ಮಟ್ಟವು ಮೂಳೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮೆದುಳಿನ ಕಾರ್ಯಚಟುವಟಿಕೆಯನ್ನು ಬಾಧಿಸುವ ಆಲ್ಝೈಮರ್ಸ್ ಮತ್ತು ಬುದ್ಧಿಮಾಂದ್ಯತೆಯಂತಹ ಕಾಯಿಲೆಗಳ ಭಯವಿಲ್ಲ. ಬೆಳ್ಳುಳ್ಳಿ ಮೊಡವೆ ಉಂಟುಮಾಡುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ. ಚರ್ಮಕ್ಕೆ ಒಳ್ಳೆಯದು. ಕೀಲು ನೋವು ಮತ್ತು ಸ್ನಾಯು ನೋವಿಗೆ ಬೆಳ್ಳುಳ್ಳಿ ಎಣ್ಣೆಯನ್ನು ಹಚ್ಚುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಚಳಿಗಾಲದಲ್ಲಿ ಊಟಕ್ಕೆ ಮೊದಲು ಎರಡು ಎಸಳು ಬೆಳ್ಳುಳ್ಳಿಯನ್ನು ಅನ್ನದೊಂದಿಗೆ ಬೆರೆಸಿ ಸೇವಿಸುವುದು ಉತ್ತಮ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!