ಹೊಸದಿಗಂತ ವರದಿ,ಶ್ರೀರಂಗಪಟ್ಟಣ :
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗೊಳ ಬಳಿಯ ಎಡಮುರಿಯಲ್ಲಿ ಸಂಭವಿಸಿದೆ.
ಸ್ಯಾಮ್ (20) ಹಾಗೂ ವೆಂಕಟೇಶ (20) ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳು. ಇವರು ಬೆಂಗಳೂರಿನ ದಾನ್ ಬಾಸ್ಕೋ ಕಾಲೇಜಿನಲ್ಲಿ ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ಇಂದು ಕಾಲೇಜಿಗೆ ರಜೆ ಇದ್ದ ಕಾರಣ ತನ್ನ ಏಳು ಜನ ಸ್ನೇಹಿತರೊಂದಿಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಡಿವೈಎಸ್‌ಪಿ ಶಾಂತ ಮಲ್ಲಪ್ಪ ಸೇರಿದಂತೆ ಕೆ.ಆರ್.ಎಸ್ ಠಾಣಾ ಪೋಲೀಸರು ತೆರಳಿ, ಶವಗಳನ್ನು ನದಿಯಿಂದ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.