ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ಚುನಾವಣಾ ಅಖಾಡ ರಂಗೇರುತ್ತಿದ್ದು, ಬಿಜೆಪಿ ಪರ ಅಮಿತ್ ಶಾ ಭರ್ಜರಿ ಪ್ರಚಾರ ನಡೆಸಿದ್ದು, ಯುಸಿಸಿ ಜಾರಿಯ ಭರವಸೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಎರಡು ಉಚಿತ ಸಿಲಿಂಡರ್ ನೀಡುವುದಾಗಿ ಘೋಷಿಸಿದ್ದಾರೆ.
ಈಗಾಗಲೇ ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ಗ್ಯಾಸ್ ಕೊರತೆ ಹೆಚ್ಚುತ್ತಿದ್ದು, ಇದರ ನಡುವೆ ಶರ್ಮಾ ಅವರು ಎರಡು ಉಚಿತ ಸಿಲಿಂಡರ್ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಹೀಮಂತ ಬಿಸ್ವಾ ಶರ್ಮಾ, ‘ಜನತೆಗೆ ಮಹತ್ತರ ಭರವಸೆಗಳನ್ನು ಘೋಷಿಸಿದ್ದು, ಒಂದು ಬಿಹು ಮೊದಲು ಮತ್ತು ಇನ್ನೊಂದು ದುರ್ಗಾ ಪೂಜೆ ಮೊದಲು ಒಟ್ಟು ಎರಡು ಉಚಿತ ಸಿಲಿಂಡರ್ಗಳನ್ನು ನೀಡಲಾಗುವುದು. ಇದರ ಸಂಪೂರ್ಣ ಹಣ ನಾನೇ ಪಾವತಿಸುತ್ತೇನೆ ಎಂದು ಭರವಸೆ ನೀಡಿದರು.



