ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಲಂಡನ್ ಕೋರ್ಟ್ನಲ್ಲಿ ಹೇಳಿದೆ.
ಇದೀಗ ನನ್ನ ಮಕ್ಕಳಿಬ್ಬರು ವ್ಯಾಕ್ಸಿನ್‌ನ ಸೈಡ್ ಎಫೆಕ್ಟ್ಸ್‌ನಿಂದ ಮೃತಪಟ್ಟಿದ್ದಾರೆ ಎಂದು ತಂದೆಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ರಿತಿಕಾ (18), ಕಾರುಣ್ಯ (20) ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದ ಮೇಲೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ನಂತರ ಇದೀಗ ಪೋಷಕರು ಕೋರ್ಟ್ ಮೆಟ್ಟಿಲೇರಿದ್ದಾರೆ.