ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ದಿನಗಳಲ್ಲಿ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನದ ಸೇನಾ ಮಾಧ್ಯಮಗಳ ಪ್ರಕಾರ, ಕಾರ್ಯಾಚರಣೆಯಲ್ಲಿ ಆರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ.
ಗುಪ್ತಚರ ಮಾಹಿತಿಯ ಪ್ರಕಾರ, ಈ ಕಾರ್ಯಾಚರಣೆಯನ್ನು ಡಿಸೆಂಬರ್ 6 ಮತ್ತು 7 ರಂದು ಟ್ಯಾಂಕ್, ಉತ್ತರ ವಜಿರಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಥಾರ್ ಜಿಲ್ಲೆಗಳಲ್ಲಿ ನಡೆಸಲಾಗಿದೆ.
ಟ್ಯಾಂಕ್ ಜಿಲ್ಲೆಯಲ್ಲಿ, ಗುಲ್ ಇಮಾಮ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಒಂಬತ್ತು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ ನಡೆದ ಪ್ರತ್ಯೇಕ ಘರ್ಷಣೆಯಲ್ಲಿ ಕನಿಷ್ಠ 10 ಭಯೋತ್ಪಾದಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಪ್ರತ್ಯೇಕತಾವಾದಿ ಗುಂಪುಗಳಿಂದ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗುತ್ತಿವೆ. ಇದರಿಂದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಭದ್ರತಾ ಪಡೆಗಳು ಮುಂದಾಗಿವೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ.