ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಕ್ಕೆ ಎರಡು ಸಾವು, 17 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಿರ್ಮಾಣ ಹಂತದ ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿದೆ.
ಇದರಿಂದಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು,  17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆದಿದ್ದಾರೆ. ಅದರಲ್ಲಿ ಇಬ್ಬರು ಮೃತಪಟ್ಟಿದ್ದರು.

ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ಪ್ರಕಾರ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯನ್ನು ಗಮನಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!