July 21, 2026
Tuesday, July 21, 2026
spot_img

ಕಂಟೈನರ್ ಟ್ರಕ್ ಪಲ್ಟಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವೇಗವಾಗಿ ಬಂದ ಕಂಟೈನರ್ ಟ್ರಕ್ ರಸ್ತೆ ತಿರುವಿನಲ್ಲಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ ಉರಗನದೊಡ್ಡಿ ಬಳಿ ರಸ್ತೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಟ್ರಕ್ ಚಾಲಕ ಶ್ರೀನಿವಾಸ್ (26) ಮತ್ತು ಜಾರ್ಖಂಡ್‌ನಿಂದ ಬಂದಿದ್ದ ಕೇಬಲ್ ಡ್ರಿಲ್ಲಿಂಗ್ ಮೆಷಿನ್ ಆಪರೇಟರ್ ಶ್ರೀಮನ್ (25) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ನಾಲ್ವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗೆ 11.45ರ ಸುಮಾರಿಗೆ ಕೇಬಲ್ ಡ್ರಿಲ್ಲಿಂಗ್ ಯಂತ್ರಗಳಿದ್ದ ಕಂಟೈನರ್ ಟ್ರಕ್, ಐವರು ಕಾರ್ಮಿಕರೊಂದಿಗೆ ಬೊಮ್ಮಸಂದ್ರದಿಂದ ಹಾರೋಹಳ್ಳಿಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !