ಪ್ರವಾದಿ ಕುರಿತ ಹೇಳಿಕೆಗೆ ಆಕ್ರೋಶ- ರಾಂಚಿಯಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಜೆಪಿ ಮಾಜಿ ಮುಖಂಡರಾದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿ, ಹತ್ತು ಮಂದಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ವೇಳೆ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಈ ಪೈಕಿ ಇಬ್ಬರು ಮೇತಪಟ್ಟಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಉತ್ತರ ಪ್ರದೇಶದ ನಾಲ್ಕು ನಗರಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಭುಗಿಲೆದ್ದವು. ಪ್ರಯಾಗ್‌ರಾಜ್ ಮತ್ತು ಸಹರಾನ್‌ಪುರದಲ್ಲಿ ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಿದರು. ರಾಜ್ಯದ ಆರು ಜಿಲ್ಲೆಗಳ 130ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಕೆಲವು ದ್ವಿಚಕ್ರವಾಹನಗಳು ಮತ್ತು ಗಾಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಜನಸಮೂಹವನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಯೋಗ ಮಾಡಿದ್ದಾರೆ. ಆ ಬಳಿಕ ಪೊಲೀಸರು ಶಾಂತಿಯನ್ನು ಪುನಃಸ್ಥಾಪಿಸಲಾಯಿತು. ಈ ಗಲಾಟೆಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಶುಕ್ರವಾರ ರಾತ್ರಿ 9.45ರವರೆಗೆ ರಾಜ್ಯದ ಆರು ಜಿಲ್ಲೆಗಳಿಂದ 136 ಪ್ರತಿಭಟನಾ ನಿರತ ಕಿಡಿಗೇಡಿಗಳನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಸಹರಾನ್‌ಪುರದಿಂದ 45, ಪ್ರಯಾಗ್‌ರಾಜ್‌ನಿಂದ 37, ಅಂಬೇಡ್ಕರ್ ನಗರದಿಂದ 23, ಹತ್ರಾಸ್‌ನಿಂದ 20, ಮೊರಾದಾಬಾದ್‌ನಿಂದ ಏಳು ಮತ್ತು ಫಿರೋಜಾಬಾದ್ ಜಿಲ್ಲೆಯಿಂದ ನಾಲ್ವರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯರ ಪ್ರಕಾರ, ಪ್ರಯಾಗ್‌ರಾಜ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ಕಲ್ಲು ತೂರಾಟ ಮುಂದುವರೆದಿದೆ. ಮುಖ್ಯರಸ್ತೆಯಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಮತ್ತು ಕಲ್ಲು ತೂರಾಟಗಾರರ ಜೊತೆಗೆ ಹೆಚ್ಚಿನ ಜನರು ಸೇರಿಕೊಂಡಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ರಾಜದ್ಯ ಪೊಲಲೀಸರುಿ ಪ್ರತಿಬಟನೆ ತಡೆಯಲು ಸನ್ನದ್ಧರಾಗಿದ್ದರಿಂದಾಗಿ ಹೆಚ್ಚಿನ ಅನಾಹುತ ಸಂಭವಿಸಿ.ಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಿ ಎಸ್ ಚೌಹಾಣ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!