ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಾಗರಿಕ ವಿಮಾನಯಾನ ಸಚಿವಾಲಯದ ಇಬ್ಬರು ಸಲಹೆಗಾರರು ಹಾಗೂ ವಾಯುಯಾನ ನಿಯಂತ್ರಕ ಡಿಜಿಸಿಎಯ ಇಬ್ಬರು ಅಧಿಕಾರಿಗಳು ಡೆಡ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಸೇವೆಯಿಂದ ನಿವೃತ್ತರಾಗಿ ಸದ್ಯ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಲಹೆಗಾರರು 2020ರ ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು.
ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ)ನ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರು 2021ರ ಕೊರೋನಾ ಎರಡನೇ ಅಲೆಯ ವೇಳೆ ಮೃತಪಟ್ಟಿದ್ದಾರೆ.
2021 ಜನವರಿ ಮತ್ತು ಮೇ ತಿಂಗಳಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಒಟ್ಟು 44 ನಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇನ್ನು 2020ರಲ್ಲಿ 26 ಜನರಿಗೆ ಮಾತ್ರ ಸೋಂಕು ತಗುಲಿತ್ತು.