ಬುಲ್ಡೋಜರ್‌ ಟಯರ್‌ ಸ್ಪೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗಾಳಿ ತುಂಬುವ ವೇಳೆ ಟಯರ್ ಸಿಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದೆ. ರಾಯ್‌ಪುರ ಜಿಲ್ಲೆಯ ಸಿಲ್ತಾರಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬುಲ್ಡೋಜರ್‌ನ ಟಯರ್‌ಗೆ ಗಾಳಿ ತುಂಬುತ್ತಿದ್ದ ವ್ಯಕ್ತಿ, ಹಾಗೂ ಅದನ್ನು ಪರಿಶೀಲನೆ ನಡೆಸುತ್ತಿದ್ದ ವ್ಯಕ್ತಿ, ಇಬ್ಬರೂ ಸ್ಫೋಟದ ರಭಸಕ್ಕೆ ಸ್ಥಳದಲ್ಲೇ ಅಸುನೀಗಿದ್ದಾರೆ. ಸಾವನ್ನಪ್ಪಿದ ಇಬ್ಬರು ಕಾರ್ಮಿಕರನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಜಪಾಲ್ ಸಿಂಗ್ ಮತ್ತು ಪ್ರಂಜನ್ ನಾಂದೇವ್ ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆ ವಿಡಿಯೋ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.

ಟಯರ್‌ ಸ್ಪೋಟಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಧೂಳು ಆವರಿಸಿ, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!