ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಡಿಲು ಬಡಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಗಾಯಾಳುಗಳನ್ನು ದಾಮೋಹ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಛತ್ತರ್‌ಪುರ ಜಿಲ್ಲೆಯ ಬಕ್ಸ್‌ವಾಹ ಪೊಲೀಸ್ ಠಾಣೆ ವ್ಯಾಪ್ತಿಯ ಕಚಾರ್ ಗ್ರಾಮ ಹಾಗೂ ಕರ್ರಿ ಗ್ರಾಮದ ನಡುವೆ ಅರಣ್ಯ ಇಲಾಖೆಯ ತೋಟದಲ್ಲಿ ತಂತಿ ಬೇಲಿ ಅಳವಡಿಸುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ದುಡಿಯುತ್ತಿದ್ದ ಕಾರ್ಮಿಕರು ಮಳೆಯಿಂದ ರಕ್ಷಣೆ ಪಡೆಯಲು ಸಮೀಪದ ಮರಗಳ ಕೆಳಗೆ ಕುಳಿತಿದ್ದರು. ಈ ನಡುವೆ ಏಕಾಏಕಿ ಬಡಿದ ಸಿಡಿಲಿಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ದಾಮೋಹ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಠಾಣೆಯ ಪ್ರಭಾರಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.