March 11, 2026
Wednesday, March 11, 2026
spot_img

ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛಗೊಳಿಸೋಕೆ ಹೋಗಿ ಉಸಿರುಟ್ಟಿ ಇಬ್ಬರು ಸಾ*ವು

ಹೊಸದಿಗಂತ ವರದಿ ಕಲಬುರಗಿ:

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ವೇಳೆ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ ಧಾರುಣ ಘಟನೆ ಬುಧವಾರ ಕಲಬುರಗಿ ನಗರದ ಹೀರಾಪುರ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಶಿವಕುಮಾರ್ (52) ಹಾಗೂ ರತನ್ (60) ಎಂದು ಗುರುತಿಸಲಾಗಿದೆ. ಶಿವಕುಮಾರ್ ಅವರ ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆಗೆ ಇಳಿದಿದ್ದ ವೇಳೆ ವಿಷ ಅನಿಲದ ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !