Wednesday, November 29, 2023

Latest Posts

ಬಿಎಂಟಿಸಿ ಬಸ್‌ ಅಪಘಾತಕ್ಕೆ ಇಂದು ಮತ್ತಿಬ್ಬರು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಎಂಟಿಸಿ ಬಸ್‌ ಅಪಘಾತದಲ್ಲಿ ಇಂದು ಮತ್ತಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಂದು ಬೆಳಗ್ಗೆಯೇ ಹುಳಿಮಾವು ವ್ಯಾಪ್ತಿಯಲ್ಲಿ ಓರ್ವ ಮಹಿಳೆ ಹಾಗೂ ವಿಜಯನಗರದಲ್ಲಿ ಓರ್ವ ವ್ಯಕ್ತಿ ಬಿಎಂಟಿಸಿ ಬಸ್‌ಗೆ ಬಲಿಯಾಗಿದ್ದಾರೆ.

ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವ ವೇಳೆ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ವೀಣಾ ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದೆಡೆ ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋವಿಂದರಾಜನಗರ ಬೈ ಟು ಕಾಫಿ ಮುಂಭಾಗ ಕುಮಾರ್ (45) ಎಂಬುವವರು ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ತಿಂಗಳಲ್ಲಿ ಬಿಎಂಟಿಸಿ ಬಸ್‌ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಬಿಎಂಟಿಸಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!