ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಕಂಧಮಲ್ ಜಿಲ್ಲೆಯಲ್ಲಿ ಮಾವಿನ ಗೊರಟೆಯಿಂದ ಮಾಡಿದ ಗಂಜಿ ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟು, ಆರು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ದರಿಂಗ್‌ಬಾಡಿ ಬ್ಲಾಕ್‌ನ ಮಂಡಿಪಂಕ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲ ಗಂಭೀರವಾವಾಗಿ ಅಸ್ವಸ್ಥರಾದವರನ್ನು ಬ್ರಹ್ಮಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಮೃತರು ಹಾಗೂ ಅಸ್ವಸ್ಥರು ಮಾವಿನ ಬೀಜದಿಂದ ತಯಾರಿಸಿದ ಸ್ಥಳೀಯ ಆಹಾರ ಪದಾರ್ಥವನ್ನು ಸೇವಿಸಿದ್ದಾರೆ. ಸೇವಿಸಿದ ಸ್ವಲ್ಪ ಸಮಯದ ನಂತರ ಅವರೆಲ್ಲರೂ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ.
ಒಬ್ಬ ಮಹಿಳೆ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದರೆ, ಇನ್ನೊಬ್ಬ ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಬ್ರಹ್ಮಪುರಕ್ಕೆ ಸ್ಥಳಾಂತರಿಸುವಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಆಡಳಿತ ಈ ಬಗ್ಗೆ ತನಿಖೆ ಪ್ರಾರಂಭಿಸಿದೆ.