ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಸಮೀಪ ಈ ದುರಂತ ಸಂಭವಿಸಿದ್ದು,
ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಬ್ಬು ತುಂಬಿಕೊಂಡು ಲಾರಿ ಸಾಗುತ್ತಿತ್ತು . ಈ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದೆ. ಲಾರಿಯಲ್ಲಿ ಹಸಿ ಕಬ್ಬು ಇದ್ದುದರಿಂದ ಇಡೀ ಲಾರಿಗೆ ವಿದ್ಯುತ್ ಪ್ರವಹಿಸಿದೆ. ಆಗ ಡ್ರೈವರ್ ಮತ್ತು ಕ್ಲೀನರ್ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಅವರು ಲಾರಿಯಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದರೂ ಅಷ್ಟು ಹೊತ್ತಿಗಾಗಲೇ ಪ್ರಾಣಪಕ್ಷಿ ಹಾರಿ ಹೋಗಿದೆ.
ವಿಷಯ ತಿಳಿದ ಕೂಡಲೇ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.