ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಆರ್ ಹೊಸಳ್ಳಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನು ಮನು ಚವ್ಹಾಣ್ (35) ಹಣಮಂತ (30) ಎಂದು ಗುರುತಿಸಲಾಗಿದೆ.
ಟಾಟಾ ಏಸಿಯಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಯಾದಗರಿಯ ಮುದ್ನಾಳ್ ತಾಂಡದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.