ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿ ದುರಂತ: ವಿದ್ಯುತ್​ ತಗುಲಿ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿರಾರ್‌ನ ಕಾರ್ಗಿಲ್ ನಗರದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್​ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ವಿದ್ಯುತ್ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ರೂಪೇಶ್ ಸುರ್ವೆ (30) ಮತ್ತು ಸುಮಿತ್ ಸುತ್ (23) ಎಂಬ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮುಂಬೈನ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಗಿಲ್ ನಗರದ ಬೌಧಜನ ಪಂಚಾಯತ್ ಸಮಿತಿ ವತಿಯಿಂದ ಡಾ. ಬಿ.ಆರ್​ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಮೆರವಣಿಗೆ ಏರ್ಪಡಿಸಲಾಗಿತ್ತು. ರಾತ್ರಿ 9 ಗಂಟೆಗೆ ಮೆರವಣಿಗೆ ಆರಂಭವಾಗಿತ್ತು. 10.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!