July 23, 2026
Thursday, July 23, 2026
spot_img

ಎರಡು ಹನಿ ಬದುಕಿನ ಭದ್ರತೆ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಾಸಕ ನವೀನ್ ಚಾಲನೆ

ಹೊಸದಿಗಂತ ವರದಿ ಚಿತ್ರದುರ್ಗ:

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಶಾಸಕ ಕೆ.ಎಸ್. ನವೀನ್ ಭಾನುವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಐದು ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಭಾರತವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವುದರ ಜೊತೆಗೆ ಇತರರಲ್ಲೂ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ:

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಾಶೀ ಮಾತನಾಡಿ, ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ ನೆರೆಯ ರಾಷ್ಟ್ರಗಳಲ್ಲಿ ಇನ್ನೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಭಿಯಾನ ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1,42,851 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 1,085 ಬೂತ್‌ಗಳು, 1,162 ಲಸಿಕಾ ತಂಡಗಳು ಹಾಗೂ 235 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಬೂತ್‌ಗೆ ಬರದ ಮಕ್ಕಳಿಗೆ ಮುಂದಿನ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !