ಕೇರಳ: ಪಂಬಾ ನದಿಯಲ್ಲಿ ಮುಳುಗಿ ಇಬ್ಬರು ಸಾವು, ಒಬ್ಬರು ನಾಪತ್ತೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಂಬಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ.

ಪೊಲೀಸರ ಪ್ರಕಾರ, ಮೂವರು ಘಾಟ್‌ನಿಂದ ಸ್ನಾನ ಮಾಡಲು ನದಿಗೆ ಇಳಿದಿದ್ದರು.
“ಸಹೋದರರಾಗಿದ್ದ ಮೆರಿನ್ ಮತ್ತು ಮೆಫಿನ್ ನೀರಿನಲ್ಲಿ ಮುಳುಗಿದರು. ಅವರ ದೇಹಗಳು ನಂತರ ನೀರಿನಲ್ಲಿ ತೇಲುತ್ತಿದ್ದವು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ತೊಟ್ಟಪ್ಪುರತ್ ರಾಜನ್ ಅವರ ಮಗ ಅಬಿನ್‌ಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಅವರು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!