ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯವತಿಯರು:ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುಡಿದ ಮತ್ತಿನಲ್ಲಿ ಯುವಕನೊಬ್ಬನ ಮೇಲೆ ಇಬ್ಬರು ಯುವತಿಯರು ಹಿಗ್ಗಾಮುಗ್ಗ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಪಬ್‌ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಿದ್ದಾರೆ.

ಅನ್‌ಪ್ಲಗ್ಡ್ ಕೋರ್ಟ್‌ಯಾರ್ಡ್ ಎಂಬ ಪಬ್ ವಿಭೂತಿ ಖಂಡ್ ಪೊಲೀಸ್ ಠಾಣೆಯ ಹತ್ತಿರದಲ್ಲೇ ಇದೆ. ಗುರುವಾರ ರಾತ್ರಿ ಇಬ್ಬರು ಮಹಿಳೆಯರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಪಕ್ಕದಲ್ಲಿದ್ದ ಹೂವಿನ ಕುಂಡಗಳಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಬೌನ್ಸರ್‌ಗಳ ಸಹಾಯದಿಂದ ಯುವಕ ಪಾರಾಗಿದ್ದು ಇದೀಗ ವಿಡಿಯೋ ವೈರಲ್‌ ಆಗಿದೆ. ಪೊಲೀಸರ ಕಣ್ಣಿಗೆ ವಿಡಿಯೋ ಬಿದ್ದ ಕೂಡಲೇ ಸುಮೋಟೋ ಕೇಸ್‌ ಹಾಕಿದ್ದಾರೆ. ವ್ಯಕ್ತಿಯನ್ನು ಥಳಿಸಿದ ಇಬ್ಬರು ಮಹಿಳೆಯರನ್ನು ಗುರುತಿಸಿ ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!