ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ತಾಲೂಕಿನ ಐಯ್ಯನಪುರದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ನಾಗೇಂದ್ರ, ಮಹೇಶ್ ಎಂದು ಗುರುತಿಸಲಾಗಿದೆ. ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚೆಸ್ಕಾಂ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.