ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೋತುಬಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಸ್ಕ್ ಜೂನಿಯರ್ ಎಂಜಿನಿಯರ್ ಹಾಗೂ ಲೈನ್‌ಮ್ಯಾನ್ ಅನ್ನು ಅಮಾನತು ಮಾಡಲಾಗಿದೆ.
ಚಾಮರಾಜನಗರದ ಅಯ್ಯನಪುರದಲ್ಲಿ ರೈತರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಜೋತು ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದಡಿ ಎಂಜಿಯರ್ ಮರಿಸ್ವಾಮಿ ಹಾಗೂ ಲೈನ್‌ಮ್ಯಾನ್ ಆನಂದ್ ಎಂಬವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಚಾಮರಾಜನಗರ ಸೆಸ್ಕ್ ಇಇ ಪ್ರದೀಪ್ ಮಾಹಿತಿ ನೀಡಿದ್ದಾರೆ