ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ರೈಲು ಅಪಘಾತ ಸಂಭವಿಸಿದೆ. ಫತೇಪುರ್ ಬಳಿ ಒಂದೇ ರೈಲ್ವೆ ಟ್ರ್ಯಾಕ್‌ನಲ್ಲಿ ಎರಡು ಗೂಡ್ಸ್ ರೈಲು ಚಲಿಸಿದ್ದು, ಮುಖಾಮುಖಿ ಡಿಕ್ಕಿಯಾಗಿವೆ. ಘಟನಾ ಸ್ಥಳಕ್ಕೆ ಹಿರಿಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗಿನ ಜಾವ ಫತೇಪುರ್ ಜಿಲ್ಲೆಯಲ್ಲಿ ಈ ರೈಲು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವ ಸಿಬ್ಬಂದಿಗೂ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಆದರೆ 2 ಗೂಡ್ಸ್ ರೈಲುಗಳು ಒಂದೇ ಟ್ರ್ಯಾಕ್‌ನಲ್ಲಿ ಬಂದು ಗುದ್ದಿರೋದಕ್ಕೆ ಕಾರಣವೇನು ಅನ್ನೋದು ಆಶ್ಚರ್ಯಕ್ಕೆ ಕಾರಣವಾಗಿದೆ.
ಫತೇಪುರ್‌ನ ಶುಜಾತ್ಪುರ್ ಮತ್ತು ರುಸಲಾಬಾದ್ ರೈಲು ನಿಲ್ದಾಣಗಳ ಮಧ್ಯೆ ಈ ಅನಾಹುತ ಸಂಭವಿಸಿದೆ. ಒಂದು ಗೂಡ್ಸ್ ರೈಲಿನ ಲೋಕೋ ಪೈಲಟ್ ರೆಡ್ ಸಿಗ್ನಲ್ ದಾಟಿ ಬಂದಿದ್ದು ಈ ಅಪಘಾತ ಕಾರಣ ಎಂದು ಶಂಕಿಸಲಾಗಿದೆ.
ರೈಲ್ವೆ ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಪ್ರಕಾರ ಒಂದು ಗೂಡ್ಸ್ ರೈಲು ಟ್ರ್ಯಾಕ್ ಮೇಲೆ ನಿಂತಿದ್ದು, ಸಿಗ್ನಲ್‌ಗಾಗಿ ಕಾಯುತ್ತಿತ್ತು. ಆ ಸಂದರ್ಭದಲ್ಲಿ ಮತ್ತೊಂದು ಗೂಡ್ಸ್ ರೈಲು ಅದೇ ಟ್ರ್ಯಾಕ್‌ನಲ್ಲಿ ವೇಗವಾಗಿ ಬಂದಿದೆ. ನಿಂತಿದ್ದ ಗೂಡ್ಸ್ ರೈಲಿಗೆ ಮತ್ತೊಂದು ಗೂಡ್ಸ್ ರೈಲು ಗುದ್ದಿ ಈ ಅಪಘಾತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೂಡ್ಸ್ ರೈಲುಗಳ ಅಪಘಾತದಿಂದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.