ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಸರಕು ರೈಲುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿದ್ದು, ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಬುಧವಾರ ಬೆಳಗ್ಗೆ ಮಧ್ಯಪ್ರದೇಶದ ಸಿಂಗ್‌ಪುರ ರೈಲು ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಡಿಕ್ಕಿ ಬಳಿಕ ರೈಲುಗಳ ಇಂಜಿನ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗ ಉರಿದಿದೆ. ಘಟನೆ ಬಳಿಕ ಬಿಲಾಸ್ಪುರ್-ಕಟ್ನಿ ಮಾರ್ಗದ ಎಲ್ಲಾ ರೈಲುಗಳ ಮೇಲೆ ಪರಿಣಾಮ ಬೀರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಿದ್ದರೆ, ಇನ್ನೂ ಕೆಲ ರೈಲುಗಳು ರದ್ದಾಗಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.