ರಾಮನವಮಿಯಂದು ಮಾಂಸಾಹಾರ ವಿತರಣೆ ವಿಚಾರವಾಗಿ ವಿವಾದ; ಜೆಎನ್‌ಯು ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಕಾವೇರಿ ವಿದ್ಯಾರ್ಥಿ ನಿಲಯದಲ್ಲಿ ಮಾಂಸಾಹಾರ ಸೇವನೆ ವಿಚಾರವಾಗಿ ಎಬಿವಿಪಿ ವಿದ್ಯಾರ್ಥಿಗಳು ಮತ್ತು ವಿವಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಅಕ್ಷಿತಾ ಅನ್ಸಾರಿ ಎಂಬ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡಿದ್ದಾರೆ.
ನಿನ್ನೆ ಶ್ರೀರಾಮನವಮಿ ಹಬ್ಬವಾದ್ದರಿಂದ ಹಾಸ್ಟೆಲ್‌ನಲ್ಲಿ ಮಾಂಸಾಹಾರ ವಿತರಣೆ ಮಾಡದಂತೆ ಎಬಿವಿಪಿ ಸಂಘಟನೆ ತಾಕೀತು ಮಾಡಿದೆ. ಈ ವಿಚಾರಕ್ಕೆ ಜೆಎನ್‌ಯು ವಿದ್ಯಾರ್ಥಿಗಳು ಹಾಗೂ ಎಬಿವಿಪಿ ನಡುವೆ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟದಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಆರೋಪವನ್ನು ಅಲ್ಲೆಗೆಳೆದ ಎಬಿವಿಪಿ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ನಡೆಸಲಾಗುತ್ತಿದ್ದ ರಾಮನವಮಿ ಪೂಜೆಗೆ ಎಡಪಂಥೀಯ ವಿದ್ಯಾರ್ಥಿಗಳು ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಪ್ರಸ್ತುತ ಪರಿಸ್ಥಿತಿ ಶಾಂತವಾಗಿದ್ದು, ಎರಡೂ ಕಡೆಯವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿವೆ. ದೂರು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ನೈಋತ್ಯ ಡಿಸಿಪಿ ಮನೋಜ್ ಸಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!