Thursday, December 25, 2025

ಚಿತ್ರದುರ್ಗ ಅಪಘಾತದಲ್ಲಿ ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. 

ಬೆಂಗಳೂರಿನಿಂದ ಬುಧವಾರ ರಾತ್ರಿ ಬಸ್ ಹತ್ತಿ ಹೊರಟಿದ್ದರು. ಅಪಘಾತದಲ್ಲಿ ಕಣ್ಮರೆಯಾಗಿದ್ದು, ಚಿತ್ರದುರ್ಗದ ಹಿರಿಯೂರಿನತ್ತ ಯುವತಿಯರ ಪೋಷಕರು ಹೊರಟಿದ್ದಾರೆ.

error: Content is protected !!