ಕಾಶ್ಮೀರದಲ್ಲಿ ಇಬ್ಬರು ಹಿಜ್ಬುಲ್‌ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಸಂಘಟನೆಯ ಇಬ್ಬರು ಯೋತ್ಪಾದಕರನ್ನು ಬಂಧಿಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಂಡಿಪೋರಾದಿಂದ ಶ್ರೀನಗರದ ವರೆಗೆ ಭಯೋತ್ಪಾದಕರ ಚಲನವಲನದ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳಿಂದ ಶನಿವಾರ ವುಲ್ಲಾರ್ ವಾಂಟೇಜ್ ಅರಗಮ್ ಬಳಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾದಚಾರಿಗಳು ಮತ್ತು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಕಾರಿನಲ್ಲಿಓಡಾಟ ನಡೆಸುತ್ತಿದ್ದುದು ಪತ್ತೆಯಾಗಿತ್ತು. ಗುಗ್ರರು ಚೆಕ್‌ ಪೊಸ್ಟ್‌ ಭೇದಿಸಿಕೊಂಡು ಪರಾರಿಯಾಗುವ ಯತ್ನದಲ್ಲಿದ್ದಾಗ ಯೋಧರು ಬಂಧಿಸಿದ್ದಾರೆ. ಬಂಧಿತರನ್ನು ಹೆರ್ಪೋರಾ ಅಚಾನ್ ಪುಲ್ವಾಮಾ ನಿವಾಸಿಗಳಾದ ಅಬಿದ್ ಅಲಿ ಮತ್ತು ಫೈಸಲ್ ಹಸನ್ ಪರ್ರೆ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಎಕೆ-47 ರೈಫಲ್ , ವಿವಿಧ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು, 30 ಸುತ್ತು ಗುಂಡುಗಳ ಮ್ಯಾಗಜೀನ್‌ಗಳು, ಒಂದು ಪಿಸ್ತೂಲ್, ನಾಲ್ಕು ಸುತ್ತುಗಳ ಪಿಸ್ತೂಲ್ ಮ್ಯಾಗಜೀನ್ ಮತ್ತು ನಾಲ್ಕು ಪಿಸ್ತೂಲ್ ಗಳನ್ವನು ಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!