ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV)ವೈರಸ್ ಪತ್ತೆ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು HMPV ಕೇಸ್ ಪತ್ತೆ ಆಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಸಚಿವರು ಸಭೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದರು.
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ಮಾಡುವ ವಿಚಾರ ಆರೋಗ್ಯ ಇಲಾಖೆ ನಿರ್ಧಾರ ಮಾಡುತ್ತದೆ. ಆರೋಗ್ಯ ಇಲಾಖೆ ಯಾವೆಲ್ಲ ಕ್ರಮ ಬೇಕೋ ಅ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. HMPV ಅಪಾಯಕಾರಿ ಅಲ್ಲ. ಅದರೂ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಆರೋಗ್ಯ ಇಲಾಖೆ ಏನೇನು ಕ್ರಮಕ್ಕೆ ಸೂಚನೆ ಕೊಡುತ್ತೋ ಸರ್ಕಾರ ಅ ಕ್ರಮಗಳನ್ನ ತೆಗೆದುಕೊಳ್ಳಲಿದೆ ಎಂದು ಹೇಳಿದರು.