ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್‌ನಿಂದ ಹಮಾಸ್ ಉಗ್ರರು 200 ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ, ಇದರಲ್ಲಿ ಇಬ್ಬರು ಒತ್ತೆಯಾಳುಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ.
ಇನ್ನೂ ಹೆಚ್ಚಿನ ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ. ಅಮೆರಿಕ ಮೂಲದ ನಟಾಲಿ ಶೋಷನಾ ರಾನನ್ ಹಾಗೂ ಅವರ ತಂದೆ ಜುಡಿತ್ ತೈ ರಾನನ್ ಅವರನ್ನು ತಡರಾತ್ರಿ ಬಿಡುಗಡೆ ಮಾಡಿದ್ದು, ಇಸ್ರೇಲ್ ತಲುಪಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರಿಗೆ ಫೋನ್ ಮಾಡಿ ಮಾತನಾಡಿದ್ದು, ಬಿಡೆನ್ ಸಂತಸ ವ್ಯಕ್ತಪಡಿಸಿದ್ದಾರೆ.