September 18, 2026
Friday, September 18, 2026
spot_img

ಪಂಜಾಬ್, ಕಾಶ್ಮೀರದಲ್ಲಿ ಎರಡು ಐಇಡಿ ಪತ್ತೆ: ಹೈ ಅಲರ್ಟ್ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ಮತ್ತು ಕಾಶ್ಮೀರದಲ್ಲಿ 2 ಐಇಡಿಗಳು ಪತ್ತೆಯಾಗಿವೆ. ಹೈ ಅಲರ್ಟ್ ಘೋಷಿಸಲಾಗಿದೆ,

ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಯಿಂದ ದೆಹಲಿಯಲ್ಲಿ ಭಯೋತ್ಪಾದನಾ ದಾಳಿಯ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ವಿಚಾರ ಹೊರಬೀಳುತ್ತಿದ್ದಂತೆ ಇತ್ತ ಐಇಡಿ ಪತ್ತೆಯಾಗಿದೆ.

ಪಂಜಾಬ್‌ನ ಅಮೃತಸರದಲ್ಲಿ ರಯ್ಯಾ ಪೊಲೀಸ್ ಪೋಸ್ಟ್ ಸಮೀಪ ಸಂಶಯಾಸ್ಪದ ಚೀಲದಲ್ಲಿ ಐಇಡಿ ಪತ್ತೆಯಾಗಿದೆ. ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಿಮಿಸಿ, ಐಇಡಿಯನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಸಫಾಪೋರಾದಲ್ಲಿ ಮತ್ತೊಂದು ಐಇಡಿ ಪತ್ತೆಯಾಗಿದೆ. ಸೇನೆಯ ಬಾಂಬ್ ಪತ್ತೆ ದಳ (ಬಿಡಿಎಸ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಐಇಡಿಯನ್ನು ಪತ್ತೆಹಚ್ಚಿ ಕೆಲವೇ ಗಂಟೆಗಳಲ್ಲಿ ಅದನ್ನು ನಿಷ್ಕ್ರಿಯಗೊಳಿಸಿದರು.

ಉತ್ತರ ಕಾಶ್ಮೀರದಲ್ಲಿ ಇತ್ತೀಚೆಗೆ ಪತ್ತೆಯಾದ ಮೂರನೇ ಐಇಡಿ ಇದಾಗಿದೆ. ಗುರುವಾರ ತಂಗ್‌ಮರಾಗ್ ರಸ್ತೆಯಲ್ಲಿ ಮತ್ತು ಬಾರಾಮುಲ್ಲಾದಲ್ಲಿ ಒಂದು ಐಇಡಿ ಪತ್ತೆಯಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !