ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿ ಹೇಳಿದೆ.
ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಬ್ರಾಡ್‌ಶಾ ಗುರುದ್ವಾರದಲ್ಲಿ ಕೀರ್ತನೆ ರ್ಯಕ್ರಮದ ವೇಳೆ ಪರಸ್ಪರ ಪರಿಚಿತ ವ್ಯಕ್ತಿಗಳ ನಡುವೆ ಜಗಳ ನಡೆದಿದೆ. ಈ ವೇಳೆ ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಸ್ನೇಹಿತನಿಗೆ ಗುಂಡು ಹಾರಿಸಿದ್ದಾನೆ, ನಂತರ ಮತ್ತೊಬ್ಬ ವ್ಯಕ್ತಿ ಆ ವ್ಯಕ್ತಿಯ ಮೇಲೆ ಗುಂಡು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ ಬಳಿಕ ಸ್ಥಳದಿಂದ ಓಡಿ ಹೋಗಿದ್ದಾರೆ. ಈ ದಾಳಿಯು ದ್ವೇಷಪೂರಿತ ಹಿನ್ನೆಲೆಯಲ್ಲಿ ನಡೆದಿರುವುದಲ್ಲ, ಯಾವುದೋ ವಿಷಯಕ್ಕೆ ಸಂಬಂಧಿಸದಂತೆ ಜಗಳ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಅಮರ್ ಗಾಂಧಿ ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಗುಂಡಿನ ದಾಳಿಯ ಹಿಂದಿನ ಉದ್ದೇಶ ಮತ್ತು ಶಂಕಿತರನ್ನು ಕಂಡುಹಿಡಿಯಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.