ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ವರದಿ, ವಿಜಯಪುರ:
ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ಗೆ ಇಬ್ಬರು ಬಲಿಯಾಗಿದ್ದು, ಇಲ್ಲಿವರೆಗೆ 156 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ತೀವ್ರತೆ ಮಧ್ಯೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, 156 ಬ್ಲ್ಯಾಕ್ ಫಂಗಸ್ ರೋಗಿಗಳ ಪೈಕಿ, 39 ಜನರು ಗುಣಮುಖಗೊಂಡಿದ್ದಾರೆ. 24 ರೋಗಿಗಳ ಚಿಕಿತ್ಸೆಗಾಗಿ ಇತೆರೆ ಜಿಲ್ಲೆಗೆ ರವಾನಿಸಲಾಗಿದ್ದು, 91 ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ