ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ಸ್ಪೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
ಅಫ್ಘಾನಿಸ್ತಾನದ ಕಾಬೂಲ್‌ನ ದಾರುಲ್ ಅಮಾನ್ ಪ್ರದೇಶದಲ್ಲಿ ಸೋಮವಾರದಂದು ಈ ದುರಂತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತ್ರಿಚಕ್ರ ವಾಹನದಲ್ಲಿ ಅಳವಡಿಸಲಾದ ಮ್ಯಾಗ್ನೆಟಿಕ್ ಬಾಂಬ್ ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರ ಗುರುತುಗಳನ್ನು ತಾಲಿಬಾನ್ ಇನ್ನೂ ಬಹಿರಂಗಪಡಿಸಿಲ್ಲ.
ಇತ್ತೀಚೆಗೆ ಕಾಬೂಲ್‌ನಲ್ಲಿ ದಾಳಿಗಳು ಹೆಚ್ಚಾಗುತ್ತಿದ್ದು, ಬಹುತೇಕ ದಾಳಿಗಳಲ್ಲಿ ತಾಲಿಬಾನ್ ಅಧಿಕಾರಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡಿವೆ. ಈ ಘಟನೆಗಳಿಂದ ನಗರದಲ್ಲಿ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ಉಂಟು ಮಾಡಿದೆ.