ಶಾಲಾ ಬಸ್- ಟ್ರಕ್ ನಡುವೆ ಅಪಘಾತ: ಇಬ್ಬರು ಸಾವು, 30 ಕ್ಕೂ ಹೆಚ್ಚುಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಶಾಲಾ ಬಸ್ ಒಂದು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಾಘಾತದಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನಕಮಟ್ಟಾ ಸಾಹಿಬ್‌ ನಿಂದ ಪಿಕ್ನಿಕ್‌ನಿಂದ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆತರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-74 ರ ಸಿಸೈಯಾನ್ ಬಳಿ ಅಪಘಾತ ಸಂಭವಿಸಿದೆ ಎಂದು ಸಿತಾರ್‌ಗಂಜ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ತುಷಾರ್ ಸೈನಿ ತಿಳಿಸಿದ್ದಾರೆ.
ಅಪಘಾತದಲ್ಲಿ 14 ವರ್ಷದ ವಿದ್ಯಾರ್ಥಿ ಮತ್ತು 35 ವರ್ಷದ ಶಿಕ್ಷಕ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.ಅಪಘಾತದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ 22 ಮಂದಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ, ಅಪಘಾತದ ಸಮಯದಲ್ಲಿ ಒಟ್ಟು 51 ಜನರು ಬಸ್‌ನಲ್ಲಿದ್ದರು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!