Tuesday, March 21, 2023

Latest Posts

ಮಹಾರಾಷ್ಟ್ರದಲ್ಲಿ H3N2 ನಿಂದ ಇಬ್ಬರು ಬಲಿ: ಮಾಸ್ಕ್ ಬಳಕೆಗೆ ಅರೋಗ್ಯ ಸಚಿವರ ಸಲಹೆ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಹಾರಾಷ್ಟ್ರದಲ್ಲಿ H3N2 ನಿಂದ ಇಬ್ಬರು ಸಾವನ್ನಪ್ಪಿದ್ದಾರೆ .

ಈ ಕುರಿತು ವಿಧಾನಸಭೆಗೆ ಮಾಹಿತಿ ನೀಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ , 74 ವರ್ಷದ ವ್ಯಕ್ತಿಯೊಬ್ಬರು H3N2 ಉಪಥಳಿಯಿಂದ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ COVID-19 ಮತ್ತು ಇನ್ಫ್ಲುಯೆಂಜಾ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 361 H3N2 ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಸಂಬಂಧ ಇನ್ನೆರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಮಾಡುವಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಹಾರಾಷ್ಟ್ರ ಸಚಿವರು ಜನರಿಗೆ ಸಲಹೆ ನೀಡಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ವಿವರವಾದ ಚರ್ಚೆಯ ನಂತರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!