ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಯಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ವಿಜಯಪುರ ಗೊಲ್ಲರಹಟ್ಟಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!