ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಭಾನುವಾರ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕಟೋಲ್ ತಹಸಿಲ್‌ನ ಕೊತ್ವಾಲ್‌ಬುಡಿಯಲ್ಲಿರುವ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಮಧ್ಯಾಹ್ನ 1:30 ಕ್ಕೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸುತ್ತಮುತ್ತಲಿನ ದಟ್ಟಕಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು. ತದನಂತರ ಬೆಂಕಿಯನ್ನು ನಿಯಂತ್ರಿಸಲಾಗಿದೆ.