Friday, July 1, 2022

Latest Posts

ವೀಕೆಂಡ್ ಮೋಜಿಗೆ ಬಂದಿದ್ದ ಯುವಕ-ಯುವತಿ ಜಲಪಾತದಲ್ಲಿ ಬಿದ್ದು ಸಾವು

ಹೊಸ ದಿಗಂತ ವರದಿ, ಮಡಿಕೇರಿ:

ಸೋಮವಾರಪೇಟೆ ಸಮೀಪದ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಸುಂಟಿಕೊಪ್ಪದ ಇಬ್ಬರು ಸಾವಿಗೀಡಾಗಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯಾ (20) ಎಂದು ಗುರುತಿಸಲಾಗಿದೆ.
ವೀಕೆಂಡ್​ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಪ್ರವಾಸಕ್ಕೆ ‌ತೆರಳಿತ್ತೆನ್ನಲಾಗಿದ್ದು, ಈ ಸಂದರ್ಭ ಆಕಸ್ಮಿಕವಾಗಿ ಜಲಪಾತದ ಕೆಳಗೆ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ಹೋಗಿ ಶಶಿಕುಮಾರ್​ ಸಹ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಬೆಳಗ್ಗೆ 9.30 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಅನಿರೀಕ್ಷಿತ ಸಾವಿನಿಂದ ಎರಡೂ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss