April 5, 2026
Sunday, April 5, 2026
spot_img

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ: ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಏಕಲವ್ಯನ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ. ಇಂದು ಸಹ ಕಾಡಾನೆಗಳು ತೋಟದ ಮೇಲೆ ದಾಳಿ ನಡೆಸಿ, ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶ ಮಾಡಿವೆ.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸಚಿವ ಕೆ.ಜೆ ಜಾರ್ಜ್ ಅವರಿಗೂ ರೈತ ಮುಖಂಡರು ಮನವಿ ಮಾಡಿದ್ದಾರೆ.

ಅ.31 ರಂದು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಉಮೇಶ್ ಮತ್ತು ಹರೀಶ್ ಎಂಬವರು ಸಾವನ್ನಪ್ಪಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದರು

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !