ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬೈಪಾಸ್ ರಸ್ತೆ ಊರುಗಡೂರು ಬಳಿ ನಡೆದಿದೆ.
ರಸ್ತೆಗೆ ಅಡ್ಡಲಾದ ಮರ ಕಟಾವ್ ಮಾಡುವಾಗ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಒಬ್ಬರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್, ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.
ಇಬ್ಬರೂ ಕೂಲಿಕಾರ್ಮಿಕರಾಗಿದ್ದು, ರಸ್ತೆಗೆ ಅಡ್ಡಲಾಗಿದ್ದ ಮರ ಕಟಾವ್ ಮಾಡುವಾಗ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.