Monday, June 27, 2022

Latest Posts

ಗ್ಯಾಸ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ದುರಂತ: ಇಬ್ಬರು ಕಾರ್ಮಿಕರು ಮೃತ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ಬಾಟ್ಲಿಂಗ್ ಸ್ಥಾವರದಲ್ಲಿ ಭಾರೀ ದುರಂತ ಸಂಭವಿಸಿದ್ದು, ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಟ್ಯಾಂಕ್‌ ಒಳಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಉಜ್ಜಯಿನಿಯ ಘಟ್ಟಿಯಾ ತಹಸಿಲ್‌ನಲ್ಲಿ ಈ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳನ್ನು ರಾಜೇಂದ್ರ ಸಿಂಗ್(30) ಮತ್ತು ಲಖನ್ ಸಿಂಗ್(27) ಎಂದು ಗುರುತಿಸಲಾಗಿದೆ.

ಗ್ಯಾಸ್ ಟ್ಯಾಂಕ್  ಖಾಲಿ ಮಾಡಲಾಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ಮೃತದೇಹಗಳನ್ನು ಹೊರತೆಗೆಯಗುತ್ತದೆ. ನಿರ್ಲಕ್ಷ್ಯದಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ(ಎಸ್‌ಡಿಒಪಿ) ಆರ್.ಕೆ. ರಾಯ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss