Tuesday, March 21, 2023

Latest Posts

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್‌ಇಟಿ ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಬಂಧಿಸಿದ್ದು, ಅಪಾರ ಪ್ರಮಾಣದ ಮದ್ದು ಗುಂಡುಗಳು, ಎಕೆ-೪೭ ಮ್ಯಾಗಜೀನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಅನ್ವಯ ಪೊಲೀಸರು ಶೋಧಕ್ಕೆ ಇಳಿದಿದ್ದಾರೆ ಈ ವೇಳೆ ೧೭೬ ಬಿಎನ್ ಸಿಆರ್‌ಪಿಎಫ್ ಜೊತೆಗೆ ಮೊಂಚ್ ಖುದ್ ಕುಂಜರ್‌ನಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಶೋಧ ಕಾರ್ಯಾಚರಣೆ ವೇಳೆ ಝಂಡ್ಪಾಲ್ ಕುಂಜರ್ ನಿವಾಸಿಗಳಾದ ಖುರ್ಷಿದ್ ಅಹ್ಮದ್ ಖಾನ್ ಮತ್ತು ರಿಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯ ವೇಳೆ ಬಂಧಿತ ಉಗ್ರರು ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್‌ಇಟಿ ಜತೆ ಸಹಚರರಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!