ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೋಯ್ಬಾದ ಇಬ್ಬರು ಉಗ್ರರನ್ನು ಜಮ್ಮು ಕಾಶ್ಮೀರ ಪೋಲೀಸರು ಬಂಧಿಸಿದ್ದಾರೆ.
ಪೋಲೀಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಬದ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಂಧಿತರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಹೈಬ್ರಿಡ್ ಭಯೋತ್ಪಾದಕನನ್ನು ಗುಲ್ಶನಾಬಾದ್ ಹೈದರ್ಪೋರಾ ನಿವಾಸಿ ಮುದಬೀರ್ ಅಜಾಜ್ ಇನ್ನೊಬ್ಬನನ್ನು ಆತನ ಸಹಚರ ನ್ಯೂ ಕಾಲೋನಿ ಓಂಪೋರಾ ನಿವಾಸಿ ಸೈಯದ್ ಮುಂತಾಹ ಮೆಹರಾಜ್ ಎಂದು ಗುರುತಿಸಲಾಗಿದೆ. ಬಂಧಿತರು ಎಲ್ಇಟಿ ಭಯೋತ್ಪಾದಕರಿಗೆ ಸಾರಿಗೆ ವ್ಯವಸ್ಥೆ ಮತ್ತು ಬದ್ಗಾಮ್ ಜಿಲ್ಲೆಯಾದ್ಯಂತ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಾಗಣೆಯಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.