ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ

ಹೊಸದಿಗಂತ ವರದಿ ಕಲಬುರಗಿ:

ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಬಳಿ ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು.ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿ, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು.

ನಿನ್ನೆ ತಡರಾತ್ರಿ ಇದ್ದಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದನು ಎಂದು ತಿಳಿದುಬಂದಿದೆ.ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ, ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗ ಮಧ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!