ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೈಲು ಹಳಿ ದಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳಿಬ್ಬರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಚಿಕ್ಕಬಾಣವಾರದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಮೆಡಿಕಲ್ ವ್ಯಾಸಾಂಗ ಮಾಡುತ್ತಿದ್ದ ಕೇರಳ ಮೂಲದ 20 ವರ್ಷದ ವಿದ್ಯಾರ್ಥಿ ಹಾಗೂ 19 ವರ್ಷದ ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಇತ್ತ ಇಬ್ಬರು ವಿದ್ಯಾರ್ಥಿಗಳ ಮಾಹಿತಿ ಪಡೆದು ಪೋಷಕರಿಗೆ ಮಾಹಿತಿ ನೀಡಲಾಗಿದೆ. ವರದಿಗಳ ಪ್ರಕಾರ ಇಬ್ಬರು ರೈಲು ದಾಟುತ್ತಿದ್ದಂತೆ ವೇಗವಾಗಿ ರೈಲು ಆಗಮಿಸಿದೆ. ವಿದ್ಯಾರ್ಥಿಗಳಿಗೆ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

